ಬಂಟ್ವಾಳದಲ್ಲಿ ನೇತ್ರಾವತಿ ಉಕ್ಕಿ ಹರಿಯಲಾರಂಭಿಸಿದೆ.
ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾನುವಾರ ಬೆಳಗ್ಗೆ 8.7 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ತಗ್ಗು ಪ್ರದೇಶಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ ಪರಿಸರದಲ್ಲಿ ನೀರು ತುಂಬಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗೂಡಿನಬಳಿಯಲ್ಲಿ ನೇತ್ರಾವತಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿಗಳಾದ ನಾಗರಾಜ್, ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಏರಿದ ನೇತ್ರಾವತಿ ಜಲಮಟ್ಟ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ"