ಬಂಟ್ವಾಳದಲ್ಲಿ ನೇತ್ರಾವತಿ ಉಕ್ಕಿ ಹರಿಯಲಾರಂಭಿಸಿದೆ.
ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾನುವಾರ ಬೆಳಗ್ಗೆ 8.7 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ತಗ್ಗು ಪ್ರದೇಶಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ ಪರಿಸರದಲ್ಲಿ ನೀರು ತುಂಬಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗೂಡಿನಬಳಿಯಲ್ಲಿ ನೇತ್ರಾವತಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿಗಳಾದ ನಾಗರಾಜ್, ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.