
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಜು.12ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು. ಜು.13ರ ಬುಧವಾರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 7.45ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದ.ಕ. ಜಿಲ್ಲೆಗೆ"