ಅಮ್ಟಾಡಿ: ತಹಸೀಲ್ದಾರ್ ಗ್ರಾಮವಾಸ್ತವ್ಯ ರದ್ದು

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲ ಎಂಬಲ್ಲಿ ವಿಶ್ವಕರ್ಮ ಸಭಾಭವನದಲ್ಲಿ ನಿಯೋಜಿಸಲಾಗಿದ್ದ ತಹಸೀಲ್ದಾರ್ ಗ್ರಾಮವಾಸ್ತವ್ಯವನ್ನು ರದ್ದುಗೊಳಿಸಲಾಗಿದೆ. ಶನಿವಾರ ಗ್ರಾಮವಾಸ್ತವ್ಯ ನಿಗದಿಯಾಗಿತ್ತು. ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ನಡೆ  ಹಳ್ಳಿ ಕಡೆ ರದ್ದುಪಡಿಸಿ ಆದೇಶವಾಗಿದ್ದು, ಬಂಟ್ವಾಳ ತಾಲೂಕಿನಲ್ಲೂ ರದ್ದುಪಡಿಸಲಾಗಿದೆ ಎಂದು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ, ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜಿಸುವ ಕಾರ್ಯದಲ್ಲಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲು ತೊಂದರೆಯಾಗುತ್ತಿರುದರಿಂದ ಹೆಚ್ಚು ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.16ರಂದು ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಜುಲೈ ತಿಂಗಳಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಮ್ಟಾಡಿ: ತಹಸೀಲ್ದಾರ್ ಗ್ರಾಮವಾಸ್ತವ್ಯ ರದ್ದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*