
ಬಂಟ್ವಾಳ: ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿನ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಯಾಸ್ ಅಲಿ ಬಿಡುಗಡೆಗೊಳಿಸಿದರು. ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ದಿವಾಕರ ಕುಂಟೂರು, ಗಣೇಶ್ ಪ್ರಭು, ಉಮ್ಮರ್ ಕುಂಞ ಸಾಲೆತ್ತೂರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕೊಟ್ಟಾರಿ, ಶಾಲಾ ಶಿಕ್ಷಕರಾದ ಶಿವಕುಮಾರ್ ಎಂ.ಜಿ , ಜಗನ್ನಾಥ ಪಿ. ಹಾಗೂ ವಿದ್ಯಾರ್ಥಿ ಸಂಘದ ಪ್ರಥಮ್ ಕಾರಂತ್ , ಪೃಥ್ವಿಕ್ ರೈ ಉಪಸ್ಥಿತರಿದ್ದರು
ಆಗಸ್ಟ್ 7ರಂದು ನಡೆಯುವ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಹಿರಿಯ ಸಾಹಿತಿ, ಉಪನ್ಯಾಸಕ ನರೇಂದ್ರ ರೈ ದೇರ್ಲ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ತಾರಾನಾಥ್ ಕೈರಂಗಳ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ಶಿಕ್ಷಕಿ ಸುಮಿತ್ರಾ ವಂದಿಸಿದರು.ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಮಿತಿಯವರು ಈ ಶಾಲಾ ಹಳೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದು ಈ ಕೆಳಗಿನ ಸಂಪರ್ಕ ಸಂಖ್ಯೆಗಳನ್ನ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಕೋರಲಾಗಿದೆ 9449329791, 9632925943, 94480009272


Be the first to comment on "ಮಂಚಿ ಕೊಳ್ನಾಡು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ"