ಬಂಟ್ವಾಳ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರ

ಬಂಟ್ವಾಳ: ಮಂಗಳೂರಿನ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ನೇತೃತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರಿಸಲಾಯಿತು.

ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಟ್ಟು 13 ನಲಿಕಲಿ ಟೇಬಲ್ ಗಳನ್ನು ಹಸ್ತಾಂತರಿಸಲಾಗಿದ್ದು, ಅವುಗಳಿಗೆ ಪೂರಕವಾಗುವಂತೆ ಕುರ್ಚಿಗಳನ್ನು ಒದಗಿಸುವ ಭರವಸೆಯನ್ನು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ನೀಡಿದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಮಾತನಾಡಿದ ವಿಎನ್ಆರ್ ಗೋಲ್ಡ್ ಮಾಲೀಕ ಬಿ.ನಾಗೇಂದ್ರ ಬಾಳಿಗಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಾಹೀರಾತು

ಟ್ರಸ್ಟ್ ಕೋಶಾಧಿಕಾರಿ ಭಾಗ್ಯಶ್ರೀ ಭಂಡಾರ್ಕರ್, ಸದಸ್ಯ ಗಿರೀಶ್ ಪೈ, ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಉಷಾ ಸುವರ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಉಪಾಧ್ಯಕ್ಷೆ ಮಮತಾ, ಎಸ್.ಡಿ.ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕುಶಲ ಎ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಪಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ವಂದಿಸಿದರು. ಹಿರಿಯ ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ