ವಿಟ್ಲ

ಸಾಲ ಮರುಪಾವತಿಸಲು ಸಾಧ್ಯವಾಗದೆ ಆತ್ಮಹತ್ಯೆ

ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಎಂಬಲ್ಲಿ ನಡೆದಿದೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೀವ ಪೂಜಾರಿ (75) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಅವರ ಪುತ್ರ ನವೀನ್ ಎಂಬಾತ ವಿಟ್ಲ ಪೊಲೀಸರಿಗೆ ನೀಡಿದ ದೂರಿನಂತೆ ಸಂಜೀವ ಪೂಜಾರಿ ಸಹಕಾರಿ ಸಂಘದಿಂದ ಸಾಲವನ್ನು ತೆಗೆದುಕೊಂಡಿದ್ದು, ಸಾಲವನ್ನು ಮರುಪಾವತಿಸುವಂತೆ ನೋಟೀಸ್‌ ಕಳುಹಿಸಿರುತ್ತಾರೆ. ಕೃಷಿ ಸಾಲವನ್ನು ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲ ಬಾದೆಯಿಂದ ಬೇಸರಗೊಂಡು ಮಾನಸಿಕವಾಗಿ ನೊಂದು ಸಾಯುವ ಉದ್ದೇಶದಿಂದ ಜುಲೈ 14ರಂದು ಸಂಜೆ  ಸುಮಾರು 5 ಗಂಟೆಗೆ ಬಂಟ್ವಾಳ ತಾಲೂಕು ಮೈಕೆ ಎಂಬಲ್ಲಿಯ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಭಾವ ಶೇಖರ ಪೂಜಾರಿ ಹಾಗೂ ಇತರರು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಂಜೆ 7 ಗಂಟೆಗೆ ಹೋಗಿದ್ದು ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ