ಬಂಟ್ವಾಳ

ಜುಲೈ 20ರಂದು ಸಂಜೆ ರೋಟರಿ ಬಿ.ಸಿ.ರೋಡ್ ಸಿಟಿ ನೂತನ ತಂಡದ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತ‌ನ ತಂಡದ ಪದಗ್ರಹಣ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಜುಲೈ 20ರ ಬುಧವಾರ ಸಂಜೆ 6.30ಕ್ಕೆ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷೆ ಪಲ್ಲವಿ ಕಾರಂತ ಸೋಮವಾರ ಸಂಜೆ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಪಿಡಿಜಿ ರೊಟೇರಿಯನ್ ಎಂ.ಪಿ.ಎಚ್.ಎಫ್. ರಂಗನಾಥ ಭಟ್ ಪದಗ್ರಹಣ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಗವರ್ನರ್ ಪ್ರಕಾಶ ಕಾರಂತ್, ಪ್ರಮುಖರಾದ ಎಲಿಯಸ್ ಸೈಂಟಿಸ್, ಕೆ.ಸತೀಶ್ ಕುಮಾರ್, ಪದ್ಮನಾಭ ರೈ, ಆಶಾಮಣಿ ಡಿ.ರೈ, ಗಣೇಶ್ ಶೆಟ್ಟಿ ಭಾಗವಹಿಸುವರು. ಜಿಎಸ್ಆರ್ ಪದ್ಮನಾಭ ರೈ ಮತ್ತು ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಮಾರ್ ಅವರ ಕೊಡುಗೆ ಸ್ಮರಿಸಿದ ಅವರು, ರೋಟರಿ ಧ್ಯೇಯೋದ್ದೇಶ ಪಾಲಿಸಿಕೊಂಡು ಕಾರ್ಯನಿರ್ವಹಿಸುವ ಭರವಸೆ ನೀಡಿದರು.
ಜಿಎಸ್ಆರ್ ಪದ್ಮ‌ನಾಭ ರೈ, ನಿಯೋಜಿತ ಕಾರ್ಯದರ್ಶಿ ಆಶಾಮಣಿ ಡಿ.ರೈ, ನಿಯೋಜಿತ ಖಜಾಂಚಿ ಗಣೇಶ್ ಶೆಟ್ಟಿ, ಪ್ರಮುಖರಾದ ಜ್ಯೋತೀಂದ್ರ ಶೆಟ್ಟಿ, ದಯಾನಂದ ಶೆಟ್ಟಿ ಮತ್ತಿತರರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ