ಬಂಟ್ವಾಳ: ಕಳೆದ ಬಾರಿ ಮಂಗಳೂರು ವಿವಿ ಬಿಕಾಂ ಪರೀಕ್ಷೆಯಲ್ಲಿ 9ನೇ RANK ಪಡೆದಿದ್ದ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ವಿದ್ಯಾರ್ಥಿ, ದೇಹದ ಮಾಂಸಖಂಡಗಳು ಕ್ಷೀಣಿಸುವ ಸಮಸ್ಯೆ ಇದ್ದರೂ ಛಲದಿಂದ ಪರೀಕ್ಷೆ ಬರೆದಿದ್ದ ಕಲ್ಲಡ್ಕ ಸಮೀಪ ಮಾಣಿ ಸನಿಹದ ಸೂರಿಕುಮೇರು ಬಳಿಯ ಕೃಷಿಕ ಗಣೇಶ್ ಭಟ್ ಉಷಾ ದಂಪತಿಯ ಮೊದಲ ಪುತ್ರ ಆದಿತ್ಯ (21) ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಜೂನ್ 21)ರಂದು ನಿಧನ ಹೊಂದಿದರು.
ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೧ನೇ ಸಾಲಿನ ಅಂತಿಮ ಬಿ.ಕಾಂ ಪದವಿಯಲ್ಲಿ ಶೇ.೯೩.೮ ಅಂಕ ಗಳಿಸಿದ್ದು, RANK ಗಳಿಸಿದ್ದ ಪ್ರತಿಭಾವಂತ ಆದಿತ್ಯ, ಹುಟ್ಟಿನಿಂದ ಮಾಂಸಖಂಡಗಳ ಬಲಹೀನತೆಯ ಸ್ಥಿತಿಯೊಂದಿಗೆ ಇನ್ನೊಬ್ಬರನ್ನು ಅವಲಂಬಿಸಿಯೇ ತನ್ನ ನಿತ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರೂ, ಪ್ರತಿಭಾಶಾಲಿಯಾಗಿ ಉತ್ತಮ ಅಂಕ ಗಳಿಸಿರುವುದು ಇತರ ಯುವಕರಿಗೆ ಮಾದರಿಯಾಗಿದ್ದರು.
ಪ್ರಾಥಮಿಕ, ಪ್ರೌಢ ವಿದ್ಯಾಭ್ಯಾಸವನ್ನು ಮಾಣಿ ಬಾಲವಿಕಾಸ ಶಾಲೆಯಲ್ಲಿ ಮಾಡಿದ ಬಳಿಕ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪಿಯುಸಿಯಲ್ಲಿ ಕಾಮರ್ಸ್ ತೆಗೆದುಕೊಂಡು, ಪದವಿಯಲ್ಲಿ ಬಿ.ಕಾಂ ಓದಿದ ಆದಿತ್ಯ, ಅಕೌಂಟೆನ್ಸಿಯಲ್ಲಿ ಆರು ಸೆಮಿಸ್ಟರ್ ಗಳಲ್ಲಿ ಶೇ.೧೦೦ ಅಂಕ ಗಳಿಸಿದ್ದರು. ಉಸಿರಾಟದ ಸಮಸ್ಯೆಯಿಂದ ವಾಪಸಾಗಿದ್ದು, ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.