ಬಂಟ್ವಾಳ

ಗೋಹತ್ಯೆ ನಿಷೇಧ ಕಾಯಿದೆ ಕಟ್ಟುನಿಟ್ಟು ಜಾರಿಗೊಳಿಸಿ: ಪೊಲೀಸರೊಂದಿಗಿನ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದ್ದು, ಆಸ್ತಿ ಮುಟ್ಟುಗೋಲು ಸಹಿತ ಸರಕಾರ ಜಾರಿ ಮಾಡಿದ ಕಾನೂನು ಸರಿಯಾಗಿ ಪಾಲನೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶುಕ್ರವಾರ ಪೋಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಸಿರೋಡಿನ ಶಾಸಕರ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ಹಿನ್ನೆಯಲ್ಲಿ ಕರೆದ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.

 ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು, ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಾಲೂಕಿನಲ್ಲಿ ಅಕ್ರಮ ಗೋಸಾಗಟ, ಗಾಂಜಾ ಸಾಗಾಟ, ಗಾಂಜಾ ಸೇವನೆ,  ಹೀಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಖಡಕ್ ಅದೇಶ ಮಾಡಿದರು.

 ಕೇರಳ ಗಡಿ ಭಾಗದಲ್ಲಿ ಪೋಲೀಸರು ಹೆಚ್ಚಿನ ನಿಗಾವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರು ಸೂಚಿಸಿದರು. ಸಭೆಯಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್  ಥೊರಾಟ್, ವಿಟ್ಲ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್., ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್,  ಗ್ರಾಮಾಂತರ ಠಾಣಾ ಎಸ್. ಐ.ಹರೀಶ್,  ಪುಂಜಾಲಕಟ್ಟೆ ಎಸ್. ಐ.ಸುತೇಶ್ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts