ಬಂಟ್ವಾಳ

ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಬಂಟ್ವಾಳದ ಆಶ್ರಯದಲ್ಲಿ ಕಾಲೇಜಿನ ವೃತ್ತಿ ಮಾರ್ಗದರ್ಶನ ಕೋಶ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಧ್ಯಮದ ಓದು- ಕಲಿಕೆಗೆ ಹೇಗೆ ಪೂರಕ ಎಂಬ ಮಾಹಿತಿ- ಸಂವಾದ ಕಾಮಾಜೆಯಲ್ಲಿರುವ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿ ಮಾತನಾಡಿ, ಜನರ ಆಲೋಚನಾ ಶಕ್ತಿ, ಅಭಿರುಚಿ ಬದಲಾದಾಗ ಅದಕ್ಕೆ ಪೂರಕವಾಗಿ ಪತ್ರಿಕೋದ್ಯಮವೂ ಬದಲಾಗುತ್ತದೆ. ಮಾಧ್ಯಮ ರಂಗವೂ ಪ್ರಜಾತಂತ್ರ ವ್ಯವಸ್ಥೆಯನ್ನು ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದರು.

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿ, ನಿರಂತರ ಓದಿನಿಂದ ನಮ್ಮ ಬರವಣಿಗೆಯೂ ಗಟ್ಟಿಯಾಗುತ್ತಾ ಸಾಗುತ್ತದೆ. ವಿದ್ಯಾರ್ಥಿಗಳು ಓದಿನ ಕುರಿತು ವಿಶೇಷ ಆಸಕ್ತಿ ವಹಿಸಬೇಕು, ಒಂದು ಬರವಣಿಗೆಯನ್ನು ಹೇಗೆ ಓದಬೇಕು ಎಂಬ ಕೌಶಲ್ಯವೂ ಅತಿ ಅಗತ್ಯವಾಗಿದೆ ಎಂದರು.

ಜಾಹೀರಾತು

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಕಾಲೇಜಿನ ಪ್ರಿನ್ಸಿಪಾಲ್  ಡಾ. ಪ್ರಕಾಶ್ಚಂದ್ರ ಶಿಶಿಲ ಶುಭ ಹಾರೈಸಿದರು.  ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್‌ಕುಮಾರ್ ರೈ ಉಪಸ್ಥಿತರಿದ್ದರು.

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೋಹರ ಪ್ರಸಾದ್ ಅವರನ್ನು ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಹರೀಶ ಮಾಂಬಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷರಾದ ವೆಂಕಟೇಶ್ ಬಂಟ್ವಾಳ,  ಸಂದೀಪ್ ಸಾಲ್ಯಾನ್, ರಮೇಶ್ ಕೆ. ಪುಣಚ, ಪದಾಧಿಕಾರಿಗಳಾದ ರತ್ನದೇವ್ ಪುಂಜಾಲಕಟ್ಟೆ, ಯಾದವ್ ಅಗ್ರಬೈಲ್, ಕಿಶೋರ್ ಪೆರಾಜೆ, ಕಿರಣ್ ಸರಪಾಡಿ ಮತ್ತು ಚಂದ್ರಶೇಖರ ಕಲ್ಮಲೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ