ಬಂಟ್ವಾಳ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರ ಧ್ವಜದ ಅಪಮಾನ ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧ ನಿರ್ಧಾರದಂತೆ ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ವಾಳದ ಉಪತಹಸೀಲ್ದಾರ್ ನರೇಂದ್ರನಾಥ್ ಮೂಲಕ ತಹಸೀಲ್ದಾರರಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ನೀಡಿದೆ.
ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ, ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಹಾಗಾಗಿ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯನ್ನು ನೀಡಲಾಯಿತು. ಈ ವೇಳೆಯಲ್ಲಿ ಮಾಧವ, ರಾಘವೇಂದ್ರ ಕಮಾಜೆ, ನಾಗೇಶ್ ಭಂಡಾರಿ, ಯದೇಶ್ ತುಂಬೆ, ಗೀತಾ ಯೋಗೇಶ್, ಸೋಮನಾಥ ಬಂಟ್ವಾಳ ಜಯಕುಮಾರ್ ಮಂಜಲಪಾಡೆ, ರಾಧಾಕೃಷ್ಣ, ಕಿರಣ್ ಮತ್ತು ಅಜಿತ್ ಉಪಸ್ಥಿತರಿದ್ದರು.