ಕಲ್ಲಡ್ಕ

ಅಪಘಾತ ಗಾಯಾಳುವಿಗೆ ಶಾಸಕ ರಾಜೇಶ್ ನಾಯ್ಕ್ ಸ್ಪಂದನೆ

ಬಂಟ್ವಾಳ: ಬೆಳ್ಮಣ್ ಸಮೀಪದ ಸಂಜಯ್ ಎಂಬವರು ಅಪಘಾತದಲ್ಲಿ ಗಾಯಗೊಂಡು ಕಾಲು ಸಂಪೂರ್ಣ ಜಖಂಗೊಂಡ ಸ್ಥಿತಿಯಲ್ಲಿರುವ ಕುರಿತು ಶ್ರೀಮಂತ್ರದೇವತೆ ಸಾನಿಧ್ಯ ಕಟ್ಟೆಮಾರ್ ನ ಮನೋಜ್ ಕಟ್ಟೆಮಾರ್ ಅವರ ಗಮನಕ್ಕೆ ತಂದ ವೇಳೆ ಕೂಡಲೇ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಗಮನಕ್ಕೆ ತಂದಿದ್ದು, ಶಾಸಕರು, ತುರ್ತು ಸ್ಪಂದನೆ ನೀಡಿದ್ದಾರೆ.

ಬೆಂಗಳೂರು ಸಮೀಪ ಅಪಘಾತಗೊಂಡಿದ್ದ ಸಂಜಯ್ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಬಿಲ್ ಕಟ್ಟಲು ಆಗದೆ, ವಿಷಯವನ್ನು ಕಟ್ಟೆಮಾರ್ ಗಮನಕ್ಕೆ ತಂದಿದ್ದರು. ಶಾಸಕರು ಮೈಸೂರಿನ ಆಸ್ಪತ್ರೆ ಜೊತೆ ಮಾತನಾಡಿದ್ದು, ಕೂಡಲೇ  ಮೈಸೂರಿನಿಂದ ಮಂಗಳೂರಿನ  ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಎಲ್ಲಾ ವ್ಯವಸ್ಥೆಯನ್ನು  ಮಾಡಿಕೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts