

ಬಂಟ್ವಾಳ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಖಂಡಿಸಿದ್ದಾರೆ. ವಿಚಾರ ತಿಳಿದು ಬಹಳ ನೋವುಂಟಾಗಿದೆ. ನಿರಂತರ ನಡೆಯುತ್ತಲೇ ಇರುವ ಇಂತಹ ಸಮಾಜಘಾತುಕ ಕೃತ್ಯಗಳನ್ನು ಖಂಡಿಸುತ್ತೇವೆ. ಸರಕಾರ ಕೂಡಲೇ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ ಮುಂದೆ ಇಂತಹ ಕೃತ್ಯ ನಡೆಯದಂತೆ ಕಾನೂನು ಇನ್ನಷ್ಟು ಬಲಗೊಳಿಸಬೇಕು. ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯ ದೇವರು ಕರುಣಿಸಲಿ ಎಂದು ಸಂಪ್ರಾರ್ಥಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪ್ರವೀಣ್ ಹತ್ಯೆ: ಒಡಿಯೂರು ಶ್ರೀಗಳ ಖಂಡನೆ"