ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಬಂದ್: ಆದೇಶದಲ್ಲೇನಿದೆ?

ಸಂಜೆ 6 ರಿಂದ ಬೆಳಿಗ್ಗೆ 6ರ ವರೆಗೆ ಅಂಗಡಿ, ಮಾಲ್, ಚಿತ್ರಮಂದಿರ, ವಾಣಿಜ್ಯ ಸಂರ್ಕಿಣ, ಪಬ್ ಇತ್ಯಾದಿಗಳ ಬಂದ್‍ಗೆ ಜಿಲ್ಲಾಧಿಕಾರಿ ಆದೇಶ

ಸಂಜೆ 6ರ ಬಳಿಕ ಬಿ.ಸಿ.ರೋಡ್ ಪೇಟೆ ಪೂರ್ತಿ ಸ್ತಬ್ದಗೊಂಡಿತು. ರಸ್ತೆಗಳ ಸಂಚಾರ ವಿರಳವಾಯಿತು. ಬೆಳಗ್ಗೆ ಆರು ಗಂಟೆವರೆಗೆ ಸತತ ಮೂರು ರಾತ್ರಿ ಕೆಲ ನಿರ್ಬಂಧಗಳನ್ನು ಜಿಲ್ಲಾಧಿಕಾರಿ ವಿಧಿಸಿದ್ದು, ಬಂಟ್ವಾಳದ ನಾಗರಿಕರು ಇದನ್ನು ಕಟ್ಟುನಿಟ್ಟು ಪಾಲನೆ ಮಾಡಬೇಕು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2022ರ ಜು.29ರಿಂದ 2022ರ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿರ್ಬಂಧ ಜಾರಿಗೊಳಿಸಿ ಆದೇಶಿಸಿದ್ದಾರೆ.

ಈಗಾಗಲೇ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಾಹೀರಾತು

ಜಾರಿಗೊಂಡಿರುವ ನಿರ್ಬಂಧಗಳ ವಿವರಗಳಿವು:

  • ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ 2022ರ ಜು.29ರಿಂದ ಆ.01ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು.
  • ಜಿಲ್ಲೆಯಾದ್ಯಂತ ಮಾಲ್, ಚಿತ್ರಮಂದಿರಗಳು/ಸಿನಿಮಾ ಹಾಲ್, ಪಬ್‍ಗಳನ್ನು ಜು.29ರಿಂದ ಆ.01ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚುವುದು.
  • ಸಾರ್ವಜನಿಕರು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯಗಳಿಂದ ಹೊರಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
  • ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಆಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ, ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ.
  • ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.
  • ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭಗಳನ್ನು, ಸಾಂಸ್ಕøತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ, ಜಾತ್ರಗಳನ್ನು ಮುಂದೂಡಬೇಕು.
  • ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.
  • ಹೋಟೆಲ್, ಪಾರ್ಸೆಲ್ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ.
  • ಜಿಲ್ಲೆಯ ಎಲ್ಲಾ ಸಂಧ್ಯಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಲಾಗಿದೆ.
  • ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಬಂದ್: ಆದೇಶದಲ್ಲೇನಿದೆ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*