ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸ್ವತಃ ಟ್ರಾಕ್ಟರ್ ಚಲಾಯಿಸುವ ಮೂಲಕ ನಾಟಿ ಕಾರ್ಯ ನಡೆಸಿ ಮೂಲಕ ಚಾಲನೆ ನೀಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ಕಾರ್ಯ ಮಾಡಲಾಗುತ್ತಿದೆ ಎಂದು ಈ ಸಂದರ್ಭ ಶಾಸಕ ನಾಯ್ಕ್ ತಿಳಿಸಿದರು.
ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಂದನ್ ಶೆಣೈ, ಕೃಷಿ ಅಧಿಕಾರಿ ಬಿ.ಬಿ.ಅನಗವಾಡಿ ಅವರು ಗದ್ದೆ ನಾಟಿ ಕುರಿತು ಇಲಾಖೆ ಕೈಗೊಂಡ ಕ್ರಮಗಳನ್ನು ವಿವರಿಸಿದರು.
ದೇವಳದ ಅರ್ಚಕ ನಾರಾಯಣ ಭಟ್ ಅವರು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ನಿರ್ದೇಶಕ ಸುಕೇಶ್ ಚೌಟ, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ, ಕರಿಯಂಗಳ ಗ್ರಾ.ಪಂ. ಮಾಜಿ ಅಧ್ಯಕ್ಷೆ ಚಂದ್ರಾವತಿ ದೇವಾಡಿಗ, ಸದಸ್ಯ ಲೋಕೇಶ್ ಭರಣಿ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಅಮ್ಮುಂಜೆ ಗ್ರಾ.ಪಂ.ಸದಸ್ಯ ಕಾರ್ತಿಕ್ ಬಳ್ಳಾಲ್, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ರಮನಾಥ ರಾಯಿ, ಪ್ರಮುಖರಾದ ಕಿಶೋರ್ ಪಲ್ಲಿಪಾಡಿ, ಚಂದ್ರಶೇಖರ ಬಡಕಬೈಲು, ಅಶೋಕ್ ಬಡಕಬೈಲು, ಸುಬ್ರಾಯ ಕಾರಂತ, ಶುಭಕರ ಶೆಟ್ಟಿ, ರೋಶನ್ ಪಲ್ಲಿಪಾಡಿ ಉಪಸ್ಥಿತರಿದ್ದರು.
Be the first to comment on "ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ"