ಬಂಟ್ವಾಳ: ವೀರಕಂಭದ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ, ಶ್ರೀ ಶಾರದಾ ಭಜನಾ ಮಂದಿರ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಧಾರ್ಮಿಕ ಉಪನ್ಯಾಸ ನೀಡಿದರು.
ಭಾರತ ಮಾತಾ ಪೂಜನ ಕಾರ್ಯಕ್ರಮದ ಬಗ್ಗೆ ಪ್ರೀತಾ ಮಾತನಾಡಿದರು. ವಿರಕಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಪ್ರೇಮ ಜಯಕರ ಆಚಾರ್ಯ ಉಪಸ್ಥಿತರಿದ್ದರು. ಸಮಿತಿ ಸದಸ್ಯೆ ಕುಸುಮ ಶೆಟ್ಟಿ ಪ್ರಾರ್ಥಿಸಿದರು. ಸುಚಿತ್ರ ಸ್ವಾಗತಿಸಿದರು. ಕುಸುಮ ವಂದಿಸಿದರು. ಸೌಮ್ಯ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…