ಬಂಟ್ವಾಳ

ಸಜಿಪಮೂಡ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಬಂಟ್ವಾಳದ ಇಂಟರಾಕ್ಟ್ ಕ್ಲಬ್ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ವತಿಯಿಂದ ಸಜೀಪಮೂಡ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆಯವರು ಉದ್ಘಾಟಿಸಿದರು.

ವನಸಿರಿ ಯೋಜನೆಯಡಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ೨೦೨೨-೨೩ನೇ ಸಾಲಿನ ಇಂಟರ್‍ಯಾಕ್ಟ್ ಕ್ಲಬ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ಅಧ್ಯಕ್ಷೆಯಾಗಿ ರೈಹೆನಾ ಬಾನು ಕಾರ್ಯದರ್ಶಿಯಾಗಿ ನವ್ಯಶ್ರೀ ಹಾಗೂ ಇತರ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು. ವಿದ್ಯಾಸಿರಿ ಯೋಜನೆಯಡಿ ಶಾಲೆಗೆ ವಿದ್ಯಾಸೇತು ಪುಸ್ತಕ ನೀಡಲಾಯಿತು. ಶಾಲಾ ವಿದ್ಯಾರ್ಥಿಗಳೇ ಸಿದ್ದಪಡಿಸಿದ ಸಜೀಪವಾಣಿ ಪತ್ರಿಕೆಯ ಬಿಡುಗಡೆ ಸಮಾರಂಭ ನಡೆಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಜಲಸಿರಿ ಯೋಜನೆಯಡಿ  ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ರಚಿಸಿದ ಇಂಗುಗಡಿಗಳ ಸ್ಲೈಡ್ ಶೋ ನಡೆಯಿತು.  ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮಾತನಾಡಿ ಸಜೀಪಮೂಡ ಸರಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ಉತ್ಸಾಹ ಸಂತೋಷ ನೀಡಿದೆ. ಶಾಲೆಯಲ್ಲಿ ಇಂಟರ್‍ಯಾಕ್ಟ್ ಕ್ಲಬ್ ಆರಂಭಗೊಂಡ ಕೇವಲ ೬ ತಿಂಗಳ ಅವಧಿಯಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇತರ ಕ್ಲಬ್‌ಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದರು.  ಉಪಪ್ರಾಂಶುಪಾಲೆ ಜಯಲಕ್ಷ್ಮೀ ಪಿ.ಎನ್. ಪ್ರಾಸ್ತವಿಕವಾಗಿ ಮಾತನಾಡಿ ಶಾಲೆಯಲ್ಲಿ ಇಂಟರ್‍ಯಾಕ್ಟ್ ಕ್ಲಬ್ ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆದಿದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಕ್ಲಬ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಸೃಜನಶೀಲತೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂದರು. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕಾಗಿ ಸಜೀಪವಾಣಿ ಪತ್ರಿಕೆ ವೇದಿಕೆಯಾಗಲಿದೆ  ಎಂದು ತಿಳಿಸಿದರು.

ಈ ಸಂದರ್ಭ ನಿಕಟಪೂರ್ವಾಧ್ಯಕ್ಷ ಮಹಮ್ಮದ್ ವಳವೂರು, ಪೂರ್ವ ಸಹಾಯಕ ಗವರ್ನರ್ ರಿತೇಶ್ ಬಾಳಿಗ,  ಚುನಾಯಿತ ಅಧ್ಯಕ್ಷ ಪ್ರಕಾಶ್ ಬಾಳಿಗ, ಜೊತೆ ಕಾರ್ಯದರ್ಶಿ ಪ್ರತಿಭಾ ಎ. ರೈ, ಯೂತ್ ಡೈರಕ್ಟರ್ ಮೇಘಾ ಆಚಾರ್ಯ, ಎಸ್‌ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ,  ಸದಸ್ಯರಾದ ವಸಂತ ಪ್ರಭು, ವಿದ್ಯಾ ಅಶ್ವನಿ ರೈ, ರವೀಶ್ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು,  ದಿನಕರ, ಹಿರಿಯ ವಿದ್ಯಾರ್ಥಿ ರವೀಣ ಬಂಗೇರ, ಇಂಟರ್‍ಯಾಕ್ಟ್ ಸಂಯೋಜಕ ಬಾಲಕೃಷ್ಣ ಶೆಟ್ಟಿ,  ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇಂಟರ್‍ಯಾಕ್ಟ್ ಕ್ಲಬ್ ನಿರ್ಗಮನ ಅಧ್ಯಕ್ಷೆ ಅರ್ಪಿತಾ  ಸ್ವಾಗತಿಸಿ, ನಿರ್ಗಮನ ಕಾರ್ಯದರ್ಶಿ ಕಾವ್ಯ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ನವ್ಯಶ್ರೀ ವಂದಿಸಿದರು. ಕ್ಲಬ್ ಸದಸ್ಯೆ  ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ