ಬಂಟ್ವಾಳ: ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ೨೦೧೮ರಿಂದ ಆರಂಭಗೊಂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಂಟ್ವಾಳ ತಾಲೂಕಿನಲ್ಲಿ ಒಟ್ಟು 35,374 ಫಲಾನುಭವಿಗಳಿದ್ದು, ಪ್ರಸ್ತುತ ಸೌಲಭ್ಯವನ್ನು ಮುಂದುವರಿಸಲು ರೈತ ಭಾಂದವರು ತಮ್ಮ ಸಮೀಪದ ನಾಗರೀಕ ಸೇವಾ ಕೇಂದ್ರ(ಸಿಎಸ್‌ಸಿ) ದಲ್ಲಿ ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ತಾಲೂಕಿನಲ್ಲಿ ೨೬,೧೦೦ ರೈತರು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇದ್ದು, ಆ. 15 ಅಂತಿಮ ದಿನಾಂಕವಾಗಿರುತ್ತದೆ ಎಂದು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಂದನ್ ಶೆಣೈ ತಿಳಿಸಿದ್ದಾರೆ.