ಬಂಟ್ವಾಳ

ಆಗಸ್ಟ್ 13ರಂದು ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಅಮೃತ ಭಾರತಿಗೆ ಗಾನ ನುಡಿಯ ದೀವಿಗೆ

ಶಾಸಕ ರಾಜೇಶ್ ನಾಯ್ಕ್ ಮಾಹಿತಿ ನೀಡಿದರು.

ಬಂಟ್ವಾಳ: ಬಂಟ್ವಾಳದ ಬ್ರಹ್ಮರಕೂಟ್ಲುವಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಸನಿಹದ ಬಂಟರ ಭವನದಲ್ಲಿ ಆಗಸ್ಟ್ 13ರಂದು 75ನೇ ಸ್ವಾತಂತ್ರ್ಯ ಉತ್ಸವದ ಅಮೃತಮಹೋತ್ಸವ ಆಚರಣೆಯ ಅಂಗವಾಗಿ ಅಮೃತ ಭಾರತಿಗೆ ಗಾನ ನುಡಿಯ ದೀವಿಗೆ ಎಂಬ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಆಯೋಜಿಸಲಿದ್ದಾರೆ.

ಈ ಕುರಿತು ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಅಂದು ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಬಂಟರ ಭವನದವರೆಗೆ ಬೃಹತ್ ವಾಹನ ಜಾಥಾ, ಬೆಳಗ್ಗೆ 10.30ಕ್ಕೆ ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಯ ಕಲಿಗಳು ಎಂಬ ಕುರಿತು ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಂದ ಉಪನ್ಯಾಸ, ಬಳಿಕ ಜಗದೀಶ ಆಚಾರ್ಯ ಮತ್ತು ಬಳಗದವರಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ. ಸರ್ಕಾರಿ ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಿತ ದೇಶಭಕ್ತ ಸಾರ್ವಜನಿಕರು ಇಲ್ಲಿ ಭಾಗವಹಿಸಲಿದ್ದು, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಜಿಲ್ಲೆಯ ಕೊಡುಗೆಯನ್ನೂ ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಪಕ್ಷ, ಜಾತಿ, ಮತ ಬೇಧ ಮರೆತು ಎಲ್ಲ ಭಾರತೀಯರೂ ರಾಷ್ಟ್ರಭಕ್ತರೂ ಒಗ್ಗೂಡಿ ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಡೊಂಬಯ ಅರಳ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ