ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಕಲ್ಲಡ್ಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಶೋಭಾಯಾತ್ರೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಚಾಲಕ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್. ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ನಾಗೇಶ್ ಕಲ್ಲಡ್ಕ, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ದಿನೇಶ್ ಅಮ್ಟೂರು, ವಿದ್ಯಾಸಂಸ್ಥೆಯ ಶಿಕ್ಷಕ, ಶಿಕ್ಷಕೇತರ ವೃಂದ ಸಹಿತ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.