ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ಯ ಅಮೃತ ಮಹೋತ್ಸವವನ್ನು ಶಾಲಾ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು.
ವಿದ್ಯಾರ್ಥಿಗಳು ಧ್ವಜಾರೋಹಣದ ಸಂದರ್ಭ ಭಾರತದ ಆಕೃತಿಯಲ್ಲಿ ನಿಂತು ಗಮನ ಸೆಳೆದರು ಪ್ರೌಢಶಾಲಾ ವಿಭಾಗದ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರದ ದೈವರಾಧಕ ಮನೋಜ್ ಕಟ್ಟೆಮಾರ್, ಪಂಜಿಕಲ್ಲು ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಉದ್ಯಮಿ ಕೇಶವ ಬಂಟ್ವಾಳ, ಪಂಚಾಯತಿ ಸದಸ್ಯರಾದ ಪೂವಪ್ಪ ಮೆಂಡನ್, ಚಿತ್ತಾಕ್ಷಿ, ರೂಪ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಜಿ., ಮೌರೀಸ್ ಡಿಸೋಜಾ ಉಪಸ್ಥಿತರಿದ್ದರು. ಈ ಸಂದರ್ಭ ಶಾಲಾ ವಿದಾರ್ಥಿನಿ ಆದ್ಯ ಬಾಳೆಹಿತ್ಲು ಹಾಡಿದ ಭಾರತ ರತ್ನವು ನೀನಾಗು ಆಲ್ಬಂ ಗೀತೆಯನ್ನು ಬಿಡುಗಡೆಗೊಳಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ರಮಾನಂದ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಶೋಭಿತಾ ವಂದಿಸಿ, ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು.
Be the first to comment on "ದಡ್ಡಲಕಾಡಿನಲ್ಲಿ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ"