ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷ ಉಮೇಶ್ ಆಚಾರ್ ನೇತೃತ್ವದಲ್ಲಿ ಸ್ಥಾಪಕಾಧ್ಯಕ್ಷ ಡಾ. ವಸಂತ ಬಾಳಿಗಾ ಅವರು ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ಸೈನ್ಯಾಧಿಕಾರಿ ಮಾಧವ ಮಾರ್ಲ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ಸ್ಥಾಪಕ ಸದಸ್ಯರಾದ ಡಾ. ಎಂ. ಶ್ಯಾಮ್ ಭಟ್, ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಕೋಶಾಧಿಕಾರಿ ಜಗದೀಶ್ ಬಿ.ಎಸ್., ಕ್ಲಬ್‌ನ ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕೋಶಾಧಿಕಾರಿ ಜಯಂತ ಶೆಟ್ಟಿ, ಲಯನ್ಸ್ ನಿರ್ಮಲ ಹೃದಯ ವಿಶೇಷ ಚೇತನ ಮಕ್ಕಳ ಪಾಲನಾ ಕೇಂದ್ರದ ಸಂಚಾಲಕ ದಾಮೋದರ ಬಿ.ಎಂ., ಟ್ರಸ್ಟ್ ಕೋಶಾಧಿಕಾರಿ ಸುನೀಲ್ ಬಿ. ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಬಿ. ಶಿವಾನಂದ ಬಾಳಿಗಾ ಧನ್ಯವಾದ ಸಮರ್ಪಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…