



ಬಂಟ್ವಾಳ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಧ್ವಜಾರೋಹಣಗೈದ ಡಾ. ಸನಾ ರಾಯಿಫ್ ಮಾತನಾಡುತ್ತಾ ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕಾಗಿದ್ದು ಯುವ ಜನಾಂಗದ ಮೇಲೆ ಇದರ ಹೊಣೆಗಾರಿಕೆ ಇದೆ ಎಂದರು. ಕಾಲೇಜು ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾಕ್ಟರ್ ರಾಯಿಫ್ ರಶೀದ್ ಭಾಗವಹಿಸಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಇದೇ ವೇಳೆ ಕಾಲೇಜು ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ ನಾಯಕಿ ಫಿದಾ ನಹಿಮ ಸ್ವಾಗತಿಸಿ, ಸಿಮ್ರಾ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ಝುಬೈದ ಸಲ್ಹ ಮತ್ತು ಫಾತಿಮಾ ನಸ್ರಿಯ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ"