ಕಲ್ಲಡ್ಕ

ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.  ಧ್ವಜಾರೋಹಣಗೈದ ಡಾ. ಸನಾ  ರಾಯಿಫ್ ಮಾತನಾಡುತ್ತಾ  ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕಾಗಿದ್ದು ಯುವ ಜನಾಂಗದ ಮೇಲೆ ಇದರ ಹೊಣೆಗಾರಿಕೆ ಇದೆ ಎಂದರು.  ಕಾಲೇಜು ಪ್ರಾಂಶುಪಾಲ ಬಿ.ಕೆ.  ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ  ಡಾಕ್ಟರ್ ರಾಯಿಫ್ ರಶೀದ್ ಭಾಗವಹಿಸಿದ್ದರು.  ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಇದೇ ವೇಳೆ ಕಾಲೇಜು ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ ನಾಯಕಿ ಫಿದಾ ನಹಿಮ ಸ್ವಾಗತಿಸಿ, ಸಿಮ್ರಾ ಧನ್ಯವಾದವಿತ್ತರು.  ವಿದ್ಯಾರ್ಥಿನಿಯರಾದ  ಝುಬೈದ  ಸಲ್ಹ ಮತ್ತು ಫಾತಿಮಾ  ನಸ್ರಿಯ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ