ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ತಾಲೂಕಿನ ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸೋಮವಾರ ಆಚರಿಸಲಾಯಿತು. ಕಾಲೇಜು ಸ್ಥಳದಾನಿ ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಆಹ್ವಾನಿತ ಖಾಯಂ ಸದಸ್ಯ ಅಜೇಯ ಕುಮಾರ್ ಕೊಂಬರಬೈಲು ಅವರ ಉಪಸ್ಥಿತಿಯಲ್ಲಿ ಪ್ರೌಢಶಾಲಾ ವಿಭಾಗ ಡಿ ದರ್ಜೆಯ ನೌಕರ ಬಾಬು ಅವರು ರಾಷ್ಟ್ರ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಸಂಸ್ಥೆಯ ಪ್ರಾಂಶುಪಾಲ ಶ್ರೀಧರ ಎಚ್ ಜಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ವಾಡಿ ಎಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರಕಾಶ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ನಾಗರಾಜ ಶೆಟ್ಟಿ, ಕಮಲ್ ಶೆಟ್ಟಿ, ರಮೇಶ್ ಶೆಟ್ಟಿ, ಯಶೋದರ ಶೆಟ್ಟಿ, ಪ್ರಮೀಳ, ಕಾಲೇಜು ಉಪ ಪ್ರಾಂಶುಪಾಲೆ ವಿದ್ಯಾಕುಮಾರಿ, ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*