ಸಾಧಕರು

ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ, ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಪ್ರದಾನ

ಮಂಗಳೂರು: ವಾಟ್ಸಾಪ್ ಬಳಗವಾಗಿ ಆರಂಭಗೊಂಡ ಭ್ರಾಮರಿ ಯಕ್ಷಮಿತ್ರರು ಬಳಗ ಇದೀಗ ಯಶಸ್ವಿ ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸುತ್ತಿದ್ದು, ಈ ವರ್ಷವೂ ಮಂಗಳೂರು ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

 ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಗಸ್ಟ್ 27ರಂದು ಶನಿವಾರ ಸಂಜೆ 7 ಗಂಟೆಯಿಂದ ಮರುದಿನ ಬೆಳಗ್ಗೆವರೆಗೆ ನಡೆಯುವ ಯಕ್ಷಗಾನ ಕಾರ್ಯಕ್ರಮದ ಆರಂಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ಅವರಿಗೆ ಭ್ರಾಮರಿ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದು ಐದನೇ ವರ್ಷದ ಕಾರ್ಯಕ್ರಮವಾಗಿದೆ.

ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ,ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಜಾಹೀರಾತು

ಹಿರಿಯ ಯಕ್ಷಗಾನ ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ ಅಧ್ಯಕ್ಷತೆ ವಹಿಸಲಿದ್ದು,ಮಂಗಳೂರು ಉತ್ತರದ ಶಾಸಕ ಡಾ|ವೈ.ಭರತ್ ಶೆಟ್ಟಿ, ಮನಾಪ ಮೇಯರ್ ಪ್ರೇಮಾನಂದ ಶೆಟ್ಟಿ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಧಾರ್ಮಿಕ ಪರಿಷತ್ ಸದಸ್ಯ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ,ಮಂಗಳೂರು ಗಣೇಶೋತ್ಸವದ ಅಧ್ಯಕ್ಷ ಶಶಿಕಾಂತ್ ನಾಗ್ವೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಿವಂಗತ ಬಲಿಪ ಪ್ರಸಾದ ಭಟ್ ಅವರ ಸಂಸ್ಮರಣೆ,ಯಕ್ಷಗಾನ ಪೂರ್ವರಂಗ,ಚೆಂಡೆ ಜುಗಲ್ ಬಂಧಿ, ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ದಮಯಂತಿ ಪುನಃ ಸ್ವಯಂವರ, ಮಾಯಾತಿಲೋತ್ತಮೆ,ವೀರವರ್ಮ ಕಾಳಗ ಯಕ್ಷಗಾನದ ಪ್ರದರ್ಶನ ಜರಗಲಿದೆ.ಈ ಎಲ್ಲಾ ಕಾರ್ಯಕ್ರಮ ಗಳಿಗೂ ಉಚಿತ ಪ್ರವೇಶ ಇರುತ್ತದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts