ದಕ್ಷಿಣ ಕನ್ನಡ ಜಿಲ್ಲೆಯ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ

ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ, ಇದರಲ್ಲಿ ನೀವು ಪಾಲ್ಗೊಳ್ಳಿ.

ದಕ್ಷಿಣ ಕನ್ನಡ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲೆಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ  ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ನಾಮ ನಿರ್ದೇಶನಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ800 ಅಡಿ ಎತ್ತರದ ಏಕಶಿಲೆಯ ಶಿಲಾ ಬೆಟ್ಟದ ಮೇಲಿರುವ ಕಾರಿಂಜೇಶ್ವರ ದೇವಾಲಯ, ಮೂಡುಬಿದಿರೆಯಲ್ಲಿರುವ1000 ಕಂಬದ ಬಸದಿ, ಕುದುರೆಮುಖ ಅರಣ್ಯ ಮೀಸಲು ಪ್ರದೇಶದಲ್ಲಿ ನಿಂತಿರುವ 1788 ಅಡಿ ಎತ್ತರದ ಏಕಶಿಲಾ ಪರ್ವತಗಡಾಯಿಕಲ್ಲು, ಅದ್ಭುತ ಸುಂದರ ದೃಶ್ಯಕಾವ್ಯ ಕೊಂಕಣ ರೈಲ್ವೆಸ್ಥಳಗಳುಈಗಾಗಲೇರಾಜ್ಯದನೂರುಅದ್ಭುತಗಳಪಟ್ಟಿಯಲ್ಲಿಸ್ಥಾನಪಡೆದಿವೆ.
KAARINJA
MOODUBIDIRE BASADI
GADAYIKALLU
KONKAN RAILWAY

ಈಗಾಗಲೇ https://www.7wondersofkarnataka.comನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ದಕ್ಷಿಣ ಕನ್ನಡ ಜಿಲ್ಲೆಯ ಈ ನಾಲ್ಕು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.

ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು.ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

ಜಾಹೀರಾತು

ಏನಿದು ಅಭಿಯಾನ?:

ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.

‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.

ಜಾಹೀರಾತು

ಯಾವ ಹಂತದಲ್ಲಿದೆ ಅಭಿಯಾನ?:

ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ. ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್‌ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ತಾವು ನೋಡಿದ ಅದ್ಭುತ ಪ್ರವಾಸೀ ಸ್ಥಳ, ಪಾರಂಪರಿಕ ತಾಣ, ಅತ್ಯಾಧುನಿಕ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್‌ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.

ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್‌ ನಡೆಯುತ್ತಿದೆ.

ಜಾಹೀರಾತು

ವೋಟಿಂಗ್ ನಿಯಮ:

– ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು.

ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ.

ಜಾಹೀರಾತು

– ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ.

-ತನ್ಮೂಲಕ  ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಕ್ಷಿಣ ಕನ್ನಡ ಜಿಲ್ಲೆಯ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*