ಜಿಲ್ಲಾ ಸುದ್ದಿ

ಅಕ್ರಮ ಮರಳು ಸಾಗಾಟ ತಡೆಗೆ ಯೋಜನೆ; ಅನಧಿಕೃತ, ದ್ವೇಷಪೂರಿತ ಫ್ಲೆಕ್ಸ್ ಗೆ ಕಡಿವಾಣ – ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನೇತೃತ್ವದಲ್ಲಿ ಸಭೆ

ಮಂಗಳೂರು (ಕರ್ನಾಟಕ ವಾರ್ತೆ) : ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

ಜಿಲ್ಲೆಯ ಯಾವೆಲ್ಲಾ ಸ್ಥಳಗಳಲ್ಲಿ ಅಕ್ರಮ ಮರಳು ಶೇಖರಣೆಯಾಗಿದೆ ಎಂಬುದನ್ನು ಪತ್ತೆ ಮಾಡಿ, ಪ್ರಕರಣವನ್ನು ದಾಖಲಿಸುವಂತೆಯೂ ಪೊಲೀಸ್ ಆಯುಕ್ತರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್‍ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಾಹೀರಾತು
ಡಾ. ಕೆ.ವಿ.ರಾಜೇಂದ್ರ
   ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್‍ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು, ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್‍ಗಳ ಸಭೆ ಕರೆಯಲಾಗುವುದು ಎಂದರು.

  ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. 

ಮಂಗಳೂರು ನಗರ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‍ಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.    
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts