ವೈಭವದ ಶೋಭಾಯಾತ್ರೆ
ಕಲ್ಲಡ್ಕ ರಾಮನಗರದ ಶ್ರೀರಾಮ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಹಿನ್ನೆಲೆಯಲ್ಲಿ ಅದ್ಧೂರಿಯ ಮೊಸರು ಕುಡಿಕೆ ಉತ್ಸವದ 90ನೇ ವರ್ಷದ ಕಾರ್ಯಕ್ರಮ ಕಲ್ಲಡ್ಕದಲ್ಲಿ ಶುಕ್ರವಾರ ಸಂಜೆ ವಿಜೃಂಭಣೆಯಿಂದ ವೈಭವದ ಮೆರವಣಿಗೆಯೊಂದಿಗೆ ನಡೆಯಿತು.
ಗುರುವಾರ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀಕೃಷ್ಣ ದೇವರ ಭವ್ಯ ಶೋಭಾಯಾತ್ರೆ ನೆರವೇರಿತು.
ಶ್ರೀ ರಾಮಾಂಜನೇಯ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಕಲ್ಲಡ್ಕ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಆರ್.ಚೆನ್ನಪ್ಪ ಕೋಟ್ಯಾನ್, ಸುಲೋಚನಾ ಜಿ.ಕೆ. ಭಟ್, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಬಿ.ನಾರಾಯಣ ಸೋಮಯಾಜಿ, ವಸಂತ ಮಾಧವ, ಯತಿನ್ ಕುಮಾರ್, ಪುಷ್ಪರಾಜ್ ಶೆಟ್ಟಿಗಾರ್, ಉತ್ತಮ್ ಕುಮಾರ್ ಪಳನೀರು, ಹರೀಶ್ ಆಚಾರ್ಯ, ದಿನೇಶ್ ಅಮ್ಟೂರು, ಬೊಂಡಾಲ ಜನಾರ್ದನ ಕುಲಾಲ್, ಚಿತ್ತರಂಜನ್ ಹೊಸಕಟ್ಟ, ಮೋನಪ್ಪ ದೇವಸ್ಯ, ವಜ್ರನಾಥ ಕಲ್ಲಡ್ಕ ಸಹಿತ ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಮೊಸರು ಕುಡಿಕೆ ಒಡೆಯುವುದು, ವಿವಿಧ ಟ್ಯಾಬ್ಲೊಗಳು ಗಮನ ಸೆಳೆದವು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…