ಬಂಟ್ವಾಳ

ದೇವಾಡಿಗ ಸಮಾಜದ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣಾ ಸಮಿತಿ ಅಧ್ಯಕ್ಷರಾಗಿ ರಾಮದಾಸ್ ಬಂಟ್ವಾಳ ಆಯ್ಕೆ

ಬಂಟ್ವಾಳ: 2023ರ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ಜರಗಲಿರುವ ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ದೇವಸ್ಥಾನಕ್ಕೆ ಸಮಸ್ತ ದೇವಾಡಿಗ ಸಮಾಜ ಹಾಗೂ ಆಸ್ತಿಕ ಬಂಧುಗಳ ಸಹಕಾರದಿಂದ ಅರ್ಪಿಸಲ್ಪಡುವ ನೂತನ ರಥ ಸಮರ್ಪಣಾ ಸಮಿತಿಗೆ ಸಾಮಾಜಿಕ ನೇತಾರ, ಪ್ರಸ್ತುತ ಬಿಜೆಪಿ ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಧ್ಯಕ್ಷರಾಗಿ ಆಯ್ಕೆಗೊಂಡರು.

ಇತ್ತೀಚೆಗೆ ಬಿ.ಸಿ.ರೋಡಿನಲ್ಲಿ ನಡೆದ ದೇವಾಡಿಗ ಸಮಾಜದ ಸಮಾಲೋಚನಾ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಳೆದ 2020ರಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ದೇವಾಡಿಗ ಸಮಾಜದವರು ಸಮರ್ಪಿಸಿದ ನೂತನ ಷಷ್ಠಿರಥ ಸಮರ್ಪಣಾ ಸಮಿತಿಯ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿರುತ್ತಾರೆ. ನೂತನ ಶ್ರೀ ನಂದಾವರ ರಥ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸದಾಶಿವ ಮೊಯ್ಲಿ ಬೆಂಜನಪದವು, ಕೋಶಾಧಿಕಾರಿಯಾಗಿ ಪ್ರವೀಣ್ ದೇವಾಡಿಗ ನೆಟ್ಲ, ಗೌರವಾಧ್ಯಕ್ಷರಾಗಿ ಡಾ| ಸುಂದರ ಮೊಯ್ಲಿ, ಗೌರವ ಸಲಹೆಗಾರರಾದ ಪದ್ಮನಾಭ ದೇವಾಡಿಗ ಹಾಗೂ ಉಪಾಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಮತ್ತು ಸದಸ್ಯರ ಸಮಿತಿಗಳನ್ನು ರಚಿಸಲಾಯಿತು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts