ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದ್ದು ಸಮಸ್ತ ಅಧ್ಯಕ್ಷ ಸಯ್ಯದುಲ್ ಉಲಮಾ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವ ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಸ್ತ ಕರ್ನಾಟಕ ಮುಶಾವರ ಸ್ವಾಗತ ಸಮಿತಿ ಕನ್ವೀನರ್ ಕೆ.ಎಂ.ಉಸ್ಮಾನ್ ಫೈಝಿ ತೋಡಾರ್, ಪ್ರಮುಖರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಕಡಬ, ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಖಾಸಿಂ ದಾರಿಮಿ ನಂದಾವರ ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆ.30ರಂದು ನೇರಳಕಟ್ಟೆಯಲ್ಲಿ ಉಲಮಾ, ಉಮರಾ ಕಾನ್ಫರೆನ್ಸ್: ಅಕ್ರಮ ಚಟುವಟಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶ"
Be the first to comment on "ಆ.30ರಂದು ನೇರಳಕಟ್ಟೆಯಲ್ಲಿ ಉಲಮಾ, ಉಮರಾ ಕಾನ್ಫರೆನ್ಸ್: ಅಕ್ರಮ ಚಟುವಟಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶ"