ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಶನಿವಾರ ನಡೆಯಿತು.
ತುಳುನಾಡಿನಲ್ಲಿ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ, ಕೇರ್ಪು ಇಟ್ಟು ಧಾರ್ಮಿಕ ವಿಧಿ-ವಿದಾನ ನೆರವೇರಿಸಿ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.
ಈ ಸಂದರ್ಭ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೇಸರರಾದ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ತರು ಸೇರಿದಂತೆ ಊರ ಪರ ಊರಿನ ಭಕ್ತಾದಿಗಳು ಉಪಸ್ತಿತರಿದ್ದರು ಶನಿವಾರದಿಂದ ದಿನಾಂಕ 31ರ ಬುಧವಾರ ಬಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಇದೆ.
ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಸುಳ್ಳಮಲೆಯಲ್ಲಿರುವ ಗುಹಾತೀರ್ಥದಲ್ಲಿ ಪ್ರತಿ ವರ್ಷ ಚೌತಿಯ ಸಂದರ್ಭ ಭಕ್ತರಿಗೆ ತೀರ್ಥಸ್ನಾನಕ್ಕೆ ಅವಕಾಶವಿದೆ.
Be the first to comment on "ಸುಳ್ಳಮಲೆ ತೀರ್ಥಸ್ನಾನಕ್ಕೆ ಬಿದಿರಿನ ಕೇರ್ಪು ಇಡುವ ಕಾರ್ಯಕ್ರಮ"