ಬಂಟ್ವಾಳ

ಸುಳ್ಳಮಲೆ ತೀರ್ಥಸ್ನಾನಕ್ಕೆ ಬಿದಿರಿನ ಕೇರ್ಪು ಇಡುವ ಕಾರ್ಯಕ್ರಮ

ಸೋಣ ಅಮವಾಸ್ಯೆಯ ದಿನದಿಂದ  ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಶನಿವಾರ ನಡೆಯಿತು.

ತುಳುನಾಡಿನಲ್ಲಿ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ  ಸುಳ್ಳಮಲೆ  ಗುಹಾ ತೀರ್ಥಕ್ಕೆ  ಪ್ರಾರ್ಥನೆ ಸಲ್ಲಿಸಿ, ಕೇರ್ಪು ಇಟ್ಟು ಧಾರ್ಮಿಕ ವಿಧಿ-ವಿದಾನ ನೆರವೇರಿಸಿ ಅರಸು ಗುಡ್ಡೆಚಾಮುಂಡಿ  ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ  ನೆರವೇರಿಸಲಾಯಿತು.

ಈ ಸಂದರ್ಭ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೇಸರರಾದ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ತರು ಸೇರಿದಂತೆ ಊರ ಪರ ಊರಿನ ಭಕ್ತಾದಿಗಳು ಉಪಸ್ತಿತರಿದ್ದರು ಶನಿವಾರದಿಂದ ದಿನಾಂಕ 31ರ ಬುಧವಾರ ಬಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಇದೆ.

ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಸುಳ್ಳಮಲೆಯಲ್ಲಿರುವ ಗುಹಾತೀರ್ಥದಲ್ಲಿ ಪ್ರತಿ ವರ್ಷ ಚೌತಿಯ ಸಂದರ್ಭ ಭಕ್ತರಿಗೆ ತೀರ್ಥಸ್ನಾನಕ್ಕೆ ಅವಕಾಶವಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts