ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಇಂಟರ್ಯಾಕ್ಟ್ ಕ್ಲಬ್ ಅನ್ನು ಬಂಟ್ವಾಳದ ದಡ್ಡಲಕಾಡಿನಲ್ಲಿರುವ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರಂಭಿಸಲಾಗಿದೆ. ಈ ಸಂದರ್ಭ ಕರ್ನಾಟಕ ರಾಜ್ಯ ಸರಕಾರಿ ಶಾಲೆ ಉಳಿಸಿ ಬೆಳೆಸಿ ಕಾರ್ಯಾಧ್ಯಕ್ಷರು ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ದಡ್ಡಲಕಾಡು ಅಧ್ಯಕ್ಷರಾದ ಪ್ರಕಾಶ್ ಅಂಚನ್ ಉದ್ಘಾಟಿಸಿದರು.
ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಪುಪ್ಪರಾಜ್ ಹೆಗ್ಡೆ, ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ, ಯೂತ್ ಡೈರೆಕ್ಟರ್ ಮೇಘಾ ಆಚಾರ್ಯ, ಸಂಸ್ಥೆಯ ಮುಖ್ಯೋಪಾಧ್ಯಾಯ ರಮಾನಂದ, ಪ್ರೌಢಶಾಲಾ ವಿಭಾಗದ ಕಾರ್ಯಧ್ಯಕ್ಷರಾದ ಪುರುಷೋತ್ತಮ, ಶಿಕ್ಷಕರಾದ ಮೌರಿಸ್ ಡಿಸೋಜ, ಮಾರ್ಗದರ್ಶಿ ಶಿಕ್ಷಕಿ ಲಲಿತಾ, ಟ್ರಸ್ಟ್ ಸದಸ್ಯರಾದ ರಾಮಚಂದ್ರ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀಜಲ್ ಕಾರ್ಯಕ್ರಮ ನಿರ್ವಹಿಸಿದರು. ಭೂಮಿಕಾ ಸ್ವಾಗತಿಸಿದರು. ಜೈಮಾ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ"