ಬಂಟ್ವಾಳ

ಬಿ.ಮೂಡ ಕಾಲೇಜಿನ ಎನ್ನೆಸ್ಸೆಸ್ ನಿಂದ ನಾಯಕತ್ವ ತರಬೇತಿ ಶಿಬಿರ

ಬಂಟ್ವಾಳ: ಉತ್ತಮ ಸೇವಕರಿಗೆ ಮಾತ್ರ  ಒಳ್ಳೆಯ ನಾಯಕರಾಗಲು ಸರ್ವ ಅವಕಾಶಗಳು ಒದಗಿ ಬರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿ ಎನ್ನೆಸ್ಸಸ್  ಘಟಕಕ್ಕೆ ಸೇರಿ ಸೇವಾ ಪರಿಣತಿ ಪಡೆದುಕೊಳ್ಳಬೇಕು ಎಂದು ಬಿ.ಮೂಡ ಸ.ಪ.ಪೂ.ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಇಲ್ಲಿ ಹೇಳಿದರು.

ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್ ಡಿಪಿ) ಅನ್ವಯ ಕಾಲೇಜಿನ ಎನ್.ಎಸ್. ಎಸ್.ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ  ಶನಿವಾರದಂದು ನಡೆದ ನಾಯಕತ್ವ ತರಬೇತಿ ಶಿಬಿರವನ್ನು  ಉದ್ಘಾಟಿಸಿ ಮಾತನಾಡಿದರು. ಯುಎನ್ ಡಿಪಿಯ  ರಾಜ್ಯ ತರಬೇತುದಾರರಾದ  ಶ್ರೀಕಾಂತ್ ಪೂಜಾರಿ ಮತ್ತು ಸುರಕ್ಷಾ  ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.ಸಂಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್. ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ದಾಮೋದರ.ಇ ಸಹಕರಿಸಿದರು. ವಿದ್ಯಾರ್ಥಿನಿ ಸಂಧ್ಯಾ ಸ್ವಾಗತಿಸಿದರು. ಘಟಕದ ನಾಯಕ ಧನುಷ್ ಧನ್ಯವಾದ ಸಲ್ಲಿಸಿದರು. ಶರಣ್ಯ ಕಾರ್ಯಕ್ರಮ ನಿರ್ವಹಿಸಿದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts