ಚಾಲಕನ ನಿಯಂತ್ರಣ ಕಳೆದುಕೊಂಡ ಕೇರಳ ರಾಜ್ಯ ಸರ್ಕಾರಿ ಬಸ್, ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತ ಘಟನೆ ಇಡ್ಕಿದು ಗ್ರಾಮದ ಉರಿಮಜಲು ಸಮೀಪ ನಡೆದಿದೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಬೆಳಗ್ಗೆ ಕಾಸರಗೋಡಿನಿಂದ ಪುತ್ತೂರಿಗೆ ಬಂದು ಮರಳಿ ಕಾಸರಗೋಡಿಗೆ ತೆರಳುತ್ತಿದ್ದಾಗ ಉರಿಮಜಲು ಸಮೀಪದ ನೇರರಸ್ತೆಯಲ್ಲಿ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಬದಿಗೆ ಚಲಿಸಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ಸಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನಿಯಂತ್ರಣ ಕಳೆದುಕೊಂಡು ಮೋರಿಗೆ ಡಿಕ್ಕಿಯಾದ ಕೇರಳ ಸರ್ಕಾರಿ ಬಸ್"
Be the first to comment on "ನಿಯಂತ್ರಣ ಕಳೆದುಕೊಂಡು ಮೋರಿಗೆ ಡಿಕ್ಕಿಯಾದ ಕೇರಳ ಸರ್ಕಾರಿ ಬಸ್"