ಚಾಲಕನ ನಿಯಂತ್ರಣ ಕಳೆದುಕೊಂಡ ಕೇರಳ ರಾಜ್ಯ ಸರ್ಕಾರಿ ಬಸ್, ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತ ಘಟನೆ ಇಡ್ಕಿದು ಗ್ರಾಮದ ಉರಿಮಜಲು ಸಮೀಪ ನಡೆದಿದೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಬೆಳಗ್ಗೆ ಕಾಸರಗೋಡಿನಿಂದ ಪುತ್ತೂರಿಗೆ ಬಂದು ಮರಳಿ ಕಾಸರಗೋಡಿಗೆ ತೆರಳುತ್ತಿದ್ದಾಗ ಉರಿಮಜಲು ಸಮೀಪದ ನೇರರಸ್ತೆಯಲ್ಲಿ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಬದಿಗೆ ಚಲಿಸಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ಸಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…