ಬಂಟ್ವಾಳ: ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ಕಾಮಾಜೆಯಲ್ಲಿರುವ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಿದ್ದು, ಸಾಧಕ ವಿದ್ಯಾರ್ಥಿಗಳಾದ ತಾರಾನಾಥ್, ಅಶ್ವಿನಿ ಹೊಳ್ಳ, ಮಮತಾ ಅವರನ್ನು ಸನ್ಮಾನಿಸಿ, ದಾನಿಗಳಾದ ಫೆಲಿಕ್ಸ್ ಡಿಸೋಜ ಅವರನ್ನು ಗೌರವಿಸಿ ಮಾತನಾಡಿ, ವಿದ್ಯಾರ್ಥಿಗಳ ಕೈಯಲ್ಲೇ ಭವಿಷ್ಯವಿದ್ದು, ಭಾರತದಲ್ಲಿ ದುಡಿಯುವವರಿಗೆ ಉದ್ಯೋಗಾವಕಾಶಗಳು ಹೇರಳವಾಗಿವೆ ಎಂದರು.
ವಿಶ್ರಾಂತ ಪ್ರಿನ್ಸಿಪಾಲ್ ಪ್ರೊ.ಗಣಪತಿ ಕುಳಮರ್ವ ಮುಖ್ಯ ಅತಿಥಿಯಾಗಿ ಮಾತನಾಡಿ ಶುಭ ಹಾರೈಸಿದರು. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಪುಷ್ಪರಾಜ ಹೆಗ್ಡೆ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಿನ್ಸಿಪಾಲ್ ಡಾ. ಪ್ರಕಾಶಚಂದ್ರ ಬಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಅಚ್ಯುತ ಪೂಜಾರಿ, ಐಕ್ಯುಎಸಿ ಸಂಚಾಲಕ ಡಾ. ಸತೀಶ ಗಟ್ಟಿ, ಸಾಂಸ್ಕೃತಿಕ ಸಂಘದ ಸಂಚಾಲಕಿ ಪ್ರೊ.ಶಶಿಕಲಾ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಅಪರ್ಣ ಆಳ್ವ ಎನ್, ವಿದ್ಯಾರ್ಥಿ ಪರಿಷತ್ತಿನ ಪ್ರತಿನಿಧಿಗಳಾದ ತಾರಾನಾಥ ಕೆ, ಗುಣವತಿ, ರಕ್ಷಿತಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಕಾಲೇಜು ಪ್ರಾಚಾರ್ಯ ಡಾ.ಪ್ರಕಾಶ್ಚಂದ್ರ ಶಿಶಿಲ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ. ಅಚ್ಯುತ ಪೂಜಾರಿ ವಂದಿಸಿದರು. ಮಮತಾ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ"