ಬಂಟ್ವಾಳ

ಸೆ.4ರಂದು ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ

ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ ಇದರ ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಸೆ. 4ಭಾನುವಾರ ಬೆಳಿಗ್ಗೆ 10.30ಕ್ಕೆ ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಸಮುದಾಯ ಭವನದದಲ್ಲಿ ನಡೆಯಲಿದೆ.

ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾಮಗಾರಿಗೆ ಚಾಲನೆ ನೀಡುವರು, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಶಿಲಾಫಲಕ ಅನಾವರಣಗೊಳಿಸುವರು,

ವಿಧಾನ ಪರಿಷತ್ತ್ ಸದಸ್ಯ ಮಂಜುನಾಥ ಭಂಡಾರಿ ಕುಂಭನಿಧಿ ಸಂಚಯಕ್ಕೆ ಚಾಲನೆ ನೀಡುವರು, ಮಾಜಿ ಸಚಿವ ಬಿ. ರಮಾನಾಥ ರೈ ಕಟ್ಟಡ ವಿನ್ಯಾಸ ಅನಾವರಣಗೊಳಿಸುವರು, ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ , ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ. ಮಂಗಳೂರು ಇದರ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್, ಪುರಸಭಾ ಸದಸ್ಯೆ ಶೋಭಾ ಹರಿಶ್ಚಂದ್ರ ಭಾಗವಹಿಸುವರು. ಇದೇ ಸಂದರ್ಭ ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಅಣ್ಣಯ್ಯ ಕುಲಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾರಾಯಣ್ ಸಿ. ಪೆರ್ನೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಮಾತನಾಡಿ ೧೯೭೮ರಲ್ಲಿ ಸ್ಥಾಪನೆಯಾದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮಯ್ಯರ ಬೈಲುವಿನಲ್ಲಿ ಕಚೇರಿ ಹೊಂದಿ ಕಾರ್ಯನಿರ್ವಹಿಸಿಕೊಂಡು ಬರುತ್ತಿತ್ತು. ಕುಲಾಲ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದರ ಜೊತೆ ಜೊತೆಗೆ ಸಮಾಜದ ಬಂಧುಗಳ ಕಷ್ಟಗಳಿಗೆ ಸ್ಪಂದಿಸುತ್ತಾ ಹಿರಿಯರ ಮಾರ್ಗದರ್ಶನದೊಂದಿಗೆ ನಮ್ಮ ಸಂಘ ಮುನ್ನಡೆದುಕೊಂಡು ಬಂದಿರುತ್ತದೆ. ಸಂಘದ ಕಾರ್ಯಚಟುವಟಿಕೆಗಳಿಗೆ ಪೂರಕವಾಗುವಂತೆ ಹಾಗೂ ಸ್ವಂತ ಸಭಾಭವನ ವೊಂದನ್ನು ನಿರ್ಮಿಸ ಬೇಕೆಂಬ ಸಮಾಜ ಬಂಧುಗಳ ಬೇಡಿಕೆಯಂತೆ ಪೊಸಳ್ಳಿಯಲ್ಲಿ ಜಮೀನು ಖರೀದಿ ಹಾಗೂ ದಾನರೂಪವಾಗಿ ಬಂದ ಜಮೀನಿನಲ್ಲಿ ಸುಮಾರು ರೂ.೮೦ ಲಕ್ಷ ವೆಚ್ಚದ ನೆಲ ಅಂತಸ್ತಿನ ಸಭಾಭವನವನ್ನು ನಿರ್ಮಿಸಲಾಗಿದೆ. ಕುಲಾಲ ಬಂಧುಗಳು ಮಾತ್ರವಲ್ಲದೆ ಎಲ್ಲಾ ಸಮುದಾಯದ ಬಂಧುಗಳಿಗೆ ಅತ್ಯಂತ ಕಡಿಮೆದರದಲ್ಲಿ ಈ ಸಭಾಭವನನವನ್ನು ಬಾಡಿಗೆ ನೀಡುತ್ತಾ ಬರಲಾಗುತಿದೆ. ಈಗಿರುವ ಸಭಾಭವನದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಸಭಾಭವನವನ್ನು ವಿಸ್ತರಿಸಿ ಮೇಲಂತಸ್ತಿನ ಕಟ್ಟಡ ನಿರ್ಮಿಸುವ ಬಗ್ಗೆ ಸಂಘದ ಸದಸ್ಯರಿಂದ ಬಂದ ಸಲಹೆಯಂತೆ ಕಟ್ಟಡ ನಿರ್ಮಾಣದ ಬಗ್ಗೆ ಚಿಂತಿಸಿ ಕಟ್ಟಡ ಸಮಿತಿಯನ್ನು ರಚಿಸಿ ಸುಮಾರು ೨.೫ ಕೋಟಿ ರೂಪಾಯಿ ವೆಚ್ಚದ ಮೇಲಂತಸ್ತಿನ ಕಟ್ಟಡ ನಿರ್ಮಿಸಲು ಸಂಘ ಯೋಜನೆ ರೂಪಿಸಿ ಕಾಯೋನ್ಮುಖವಾಗಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರಾರಂಭಿಕವಾಗಿ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಾಹೀರಾತು

ಸುದ್ದಿಗೋಷ್ಟಿಯಲ್ಲಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಉಪಾಧ್ಯಕ್ಷ ಸುಂದರ ಬಿ. ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಕೋಶಾಧಿಕಾರಿ ಸತೀಶ್ ಬಿ. ಕುಲಾಲ್, ಕಟ್ಟಡ ಸಮಿತಿ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ಲಿಂಗಪ್ಪ, ಸಂಘದ ಸದಸ್ಯರಾದ ಮಚ್ಚೇಂದ್ರ ಸಾಲ್ಯಾನ್, ಮನೋಹರ ನೇರಂಬೋಳ್, ದಯಾನಂದ ನೇರಂಬೋಳ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.