ಸೆ.4ರಂದು ಬಿ.ಜಿ, ಮೋಹನದಾಸ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜದಲ್ಲಿರುವ ಕನ್ನಡ ಭವನದಲ್ಲಿ ಸೆ.4ರಂದು ಬೆಳಗ್ಗೆ 9.30ಕ್ಕೆ ಕವಿಗೋಷ್ಠಿ ಮತ್ತು 11ರಿಂದ ಬಿ.ಜಿ.ಮೋಹನದಾಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ಪ್ರಕಟಣೆ ತಿಳಿಸಿದೆ.

ಗಲ್ಫ್ ಕನ್ನಡಿಗ ಡಾಟ್ ಕಾಮ್ ಸಹಯೋಗದಲ್ಲಿ ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ವರದಿಗೆ ನೀಡಲಾಗುವ ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಗೆ ಪತ್ರಕರ್ತ ಸಂಶುದ್ದೀನ್ ಎಣ್ಮೂರು ಆಯ್ಕೆಯಾಗಿದ್ದಾರೆ.

ವಿದೇಶದಲ್ಲಿ ಮೊದಲ ಕನ್ನಡ ವೆಬ್ ಸೈಟ್ ಗಲ್ಫ್ ಕನ್ನಡಿಗ. ಕಾಮ್ ನ್ನು ಎರಡು ದಶಕಗಳ ಹಿಂದೆ ಆರಂಭಿಸಿದ್ದ  ದಿವಂಗತ ಬಿ ಜಿ ಮೋಹನ್ ದಾಸ್ ಅವರ ಸ್ಮರಣಾರ್ಥ ಡಿಜಿಟಲ್ ಮಾಧ್ಯಮದಲ್ಲಿ ಅತ್ಯುತ್ತಮ ವರದಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಳಗ್ಗೆ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಯರಾಮ ಪಡ್ರೆ ವಹಿಸುವರು. ಬಳಿಕ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಉಡುಪಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಜಂಟಿ ಕಾರ್ಯದರ್ಶಿ ಬಿ.ಜಿ.ಲಕ್ಷ್ಮೀಕಾಂತ್, ವಕೀಲ ಸುಕೇಶ್ ಕುಮಾರ್ ಶೆಟ್ಟಿ, ಶಿಕ್ಷಕಿ ಸುಧಾ ನಾಗೇಶ್ ಭಾಗವಹಿಸಲಿದ್ದು, ನಿರತ ಅಧ್ಯಕ್ಷ ಬ್ರಿಜೇಶ್ ಅಂಚನ್ ಅಧ್ಯಕ್ಷತೆ ವಹಿಸುವರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೆ.4ರಂದು ಬಿ.ಜಿ, ಮೋಹನದಾಸ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*