ಮೌನೇಶ ವಿಶ್ವಕರ್ಮ ನಿರ್ದೇಶನದ ಮೂರು ನಾಟಕಗಳಿಗೆ ಬಹುಮಾನ

ಬಂಟ್ವಾಳ: ಪತ್ರಕರ್ತ, ರ‌ಂಗನಿರ್ದೇಶಕ ಮೌನೇಶ ವಿಶ್ವಕರ್ಮ ನಿರ್ದೇಶನದ ಮೂರು ನಾಟಕಗಳು ಈ ಬಾರಿಯ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಬಹುಮಾನಗಳಿಸಿದ್ದು, ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ಸ್ಥಾನಗಳಿಸಿದ ಎರಡು ನಾಟಕಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ “ಆ ದಿನಗಳು”  ಪುತ್ತೂರಿನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು,  ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳು  ಅಭಿನಯಿಸಿದ “ತಂತ್ರಜ್ಞಾನದ ಮಾಯೆ”  ವಿಜ್ಞಾನ ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ಲಸಿಕಾಮೃತ ನಾಟಕ

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿಯೂ ಮೌನೇಶ ವಿಶ್ವಕರ್ಮ ನಿರ್ದೇಶನದಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅಭಿನಯಿಸಿದ “ಲಸಿಕಾಮೃತ” ನಾಟಕ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ  ಆಯ್ಕೆಯಾಗಿದೆ. ಮೌನೇಶ ವಿಶ್ವಕರ್ಮ‌ರವರು ಪುತ್ತೂರಿನ ಸಂಪ್ಯ‌ ನಿವಾಸಿಯಾಗಿದ್ದು, ಕಳೆದ 20 ವರ್ಷಗಳಿಂದ ಬಂಟ್ವಾಳ ದಲ್ಲಿ‌ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ರಂಗಭೂಮಿ‌ಯಲ್ಲಿ ಸಕ್ರೀಯರಾಗಿದ್ದು,ನಾಟಕ ರಚನೆ, ನಿರ್ದೇಶನ,ನಟನಾ ಕ್ಷೇತ್ರದಲ್ಲಿ  ಸಂಪನ್ಮೂಲ‌ವ್ಯಕ್ತಿಯಾಗಿ, ತರಬೇತುದಾರನಾಗಿ ಗುರುತಿಸಿಕೊಂಡಿದ್ದಾರೆ.  ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿರುವ ಇವರು ಸಂಸಾರ ಜೋಡುಮಾರ್ಗ ತಂಡವನ್ನು ಮುನ್ನಡೆಸುತ್ತಿದ್ದು,  ರೋಟರಿ ಪುತ್ತೂರು ಎಲೈಟ್ ನ ಕೋಶಾಧಿಕಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೌನೇಶ ವಿಶ್ವಕರ್ಮ ನಿರ್ದೇಶನದ ಮೂರು ನಾಟಕಗಳಿಗೆ ಬಹುಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*