ಬಂಟ್ವಾಳ: ಪತ್ರಕರ್ತ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ನಿರ್ದೇಶನದ ಮೂರು ನಾಟಕಗಳು ಈ ಬಾರಿಯ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಬಹುಮಾನಗಳಿಸಿದ್ದು, ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ಸ್ಥಾನಗಳಿಸಿದ ಎರಡು ನಾಟಕಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ “ಆ ದಿನಗಳು” ಪುತ್ತೂರಿನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು, ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ “ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿಯೂ ಮೌನೇಶ ವಿಶ್ವಕರ್ಮ ನಿರ್ದೇಶನದಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅಭಿನಯಿಸಿದ “ಲಸಿಕಾಮೃತ” ನಾಟಕ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಮೌನೇಶ ವಿಶ್ವಕರ್ಮರವರು ಪುತ್ತೂರಿನ ಸಂಪ್ಯ ನಿವಾಸಿಯಾಗಿದ್ದು, ಕಳೆದ 20 ವರ್ಷಗಳಿಂದ ಬಂಟ್ವಾಳ ದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ರಂಗಭೂಮಿಯಲ್ಲಿ ಸಕ್ರೀಯರಾಗಿದ್ದು,ನಾಟಕ ರಚನೆ, ನಿರ್ದೇಶನ,ನಟನಾ ಕ್ಷೇತ್ರದಲ್ಲಿ ಸಂಪನ್ಮೂಲವ್ಯಕ್ತಿಯಾಗಿ, ತರಬೇತುದಾರನಾಗಿ ಗುರುತಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿರುವ ಇವರು ಸಂಸಾರ ಜೋಡುಮಾರ್ಗ ತಂಡವನ್ನು ಮುನ್ನಡೆಸುತ್ತಿದ್ದು, ರೋಟರಿ ಪುತ್ತೂರು ಎಲೈಟ್ ನ ಕೋಶಾಧಿಕಾರಿಯಾಗಿದ್ದಾರೆ.