ಪಿಲಾತಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಹರ್ ಘರ್ ಜಲ್ ಘೋಷಣೆ

ಬಂಟ್ವಾಳ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ  ಪಿಲಾತಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. ಪ್ರತೀ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಮಾಡುವ ಜಲ ಜೀವನ್ ಮಿಷನ್ ಆಶಯದಂತೆ ಎಲ್ಲಾ ಮನೆಗಳಿಗೂ ನಳ್ಳಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್  ತನ್ನ ಗುರಿ ಮುಟ್ಟಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಹರ್ಷಿಣಿ, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗ್ಡೆ, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಯಮನಪ್ಪ ಕೊರವರˌ ಪಂಚಾಯತ್ ಸದಸ್ಯರುˌ ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಪಂಪು ಚಾಲಕರು ˌಆಶಾ ಕಾರ್ಯಕರ್ತೆಯರು ˌಆರೋಗ್ಯ ಸಹಾಯಕಿಯರು ಗ್ರಾಮಸ್ಥರು ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಪಿಲಾತಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಣೆ ಮಾಡಲಾಯಿತು.  ಜಲಜೀವನ್ ಮಿಷನ್ ನ ಯೋಜನಾ  ವ್ಯವಸ್ಥಾಪಕ ವಿಘ್ನೇಶ್ ರಾಜ್ ˌ ಕಿರಿಯ  ಅಭಿಯಂತರ ಕೃಷ್ಣ ˌ ಇಂಜಿನಿಯರ್ ಅಶ್ವಿನ್ˌ ಅನುಷ್ಠಾನ ಬೆಂಬಲ ಸಂಸ್ಠೆಯ ಚರಣ್ ರಾಜ್ˌ ಅನುಷ್ಥಾನ ಬೆಂಬಲ ಸಂಪನ್ಮೂಲ ಸಂಸ್ಠೆಯ ಸಿಬ್ಬಂದಿ  ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಪಿಲಾತಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಹರ್ ಘರ್ ಜಲ್ ಘೋಷಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*