ಬಂಟ್ವಾಳ: ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ- ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ಫಲ್ಗುಣಿ ಸ್ತ್ರೀಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಬಂಟ್ವಾಳ ಸ್ತ್ರೀಶಕ್ತಿ ಒಕ್ಕೂಟದ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಔಷಧಿಯುಕ್ತ ತೋಟಗಾರಿಕಾ ಗಿಡಗಳನ್ನು ಮನೆಯಲ್ಲಿ ಬೆಳೆಸುವುದರಿಂದ ರಾಸಾಯನಿಕಮುಕ್ತ ಆಹಾರ ಸೇವನೆ ಮಾಡಲು ಸಾಧ್ಯ, ತನ್ಮೂಲಕ ಆರೋಗ್ಯ ವೃದ್ಧಿಯೂ ಆಗುತ್ತದೆ ಎಂದರು.
ತಹಸೀಲ್ದಾರ್ ಡಾ. ಸ್ಮಿತಾ ರಾಮು ಮುಖ್ಯ ಅತಿಥಿಯಾಗಿ ಮಾತನಾಡಿ, ಜೀವ ಮತ್ತು ಜೀವನಕ್ಕೆ ಪೌಷ್ಟಿಕ ಆಹಾರ ಸೇವನೆ ಅತ್ಯಂತ ಅವಶ್ಯಕ ಎಂದರು.
ಬಂಟ್ವಾಳ ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಸುಶ್ಮಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಎಚ್. ಪ್ರಸ್ತಾವನೆಗೈದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ, ಬಂಟ್ವಾಳ ಸಹಾಯಕ ಸಿಡಿಪಿಒ ಶೀಲಾವತಿ, ಸಂರಕ್ಷಣಾಧಿಕಾರಿ ಭಾರತಿ ಬಿ., ತಾಲೂಕು ಸಂಯೋಜಕಿ ನವ್ಯಾ, ಬ್ಲಾಕ್ ಸೊಸೈಟಿ ಉಪಾಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು. ಮೇಲ್ವಿಚಾರಕಿ ಸುಜಾತ ಸ್ವಾಗತಿಸಿದರು. ಮೇಲ್ವಿಚಾರಕಿ ಯಶೋಧ ವಂದಿಸಿದರು. ಮೇಲ್ವಿಚಾರಕಿ ರೆಹಾನ ಕಾರ್ಯಕ್ರಮ ನಿರ್ವಹಿಸಿದರು.