ಸಂಸದಾ ಸೇವಾ ಪ್ರತಿಷ್ಠಾನದ ವತಿಯಿಂದ ವೀರಕಂಭ ಮಜಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

This image has an empty alt attribute; its file name is SAMBHRAMA-512x1024.jpeg
This image has an empty alt attribute; its file name is BANTWALNEWS-1.jpg
This image has an empty alt attribute; its file name is WhatsApp-Image-2022-08-25-at-7.55.14-AM-1-1024x1024.jpeg

ಬಂಟ್ವಾಳ: ಬಗೆ ಬಗೆಯ ಮನೋರಂಜನಾ ಆಟಗಳನ್ನು ಶಿಕ್ಷಕರು ಆಡುತ್ತಿದ್ದರೆ ವಿದ್ಯಾರ್ಥಿಗಳಿಂದ ಚಪ್ಪಾಳೆಯ ಪೋತ್ಸಾಹ.. ಹಾಡುಗಳಿಗೆ ಶಿಕ್ಷಕರು ಹೆಜ್ಜೆ ಹಾಕಿದಾಗ ಮಕ್ಕಳು ಅವರೊಂದಿಗೆ ಕುಣಿದು ಕುಪ್ಪಳಿಸಿದರು.. ಶಿಕ್ಷಕರ ರ್‍ಯಾಂಪ್ ವಾಕ್‌ಗೆ ವಿದ್ಯಾರ್ಥಿಗಳು  ಹೋ.. ಎಂದು ಬೊಬ್ಬಿಡುತ್ತಾ ಸಂಭ್ರಮಿಸಿದರು..

ಸಂಸದಾ ಸೇವಾ ಪ್ರತಿಷ್ಠಾನ ಬಂಟ್ವಾಳ ಇದರ ಆಶ್ರಯದಲ್ಲಿ ತಾಲೂಕಿನ ವೀರಕಂಬ- ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಝಲಕ್ ಇದು.

ಮಕ್ಕಳ ಕಲಿಕೆ, ಓದು, ಶಾಲಾ ಚಟುವಟಿಕೆ, ಇಲಾಖೆಯ ಕಾರ್ಯಕ್ರಮಗಳು ಹೀಗೆ ಸದಾ ಒತ್ತಡದಲ್ಲೇ ಕೆಲಸ ಮಾಡುವ ಶಿಕ್ಷಕರಿಗೆ ಮನೋರಂಜನೆಯನ್ನು ನೀಡುವ ಉದ್ದೇಶದಿಂದ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಮಂಗಳವಾರ ಸಂಸದಾ ಸೇವಾ ಪ್ರತಿಷ್ಠಾನದ ವತಿಯಿಂದ ಸಂಸ್ಥೆಯ ಸದಸ್ಯರಾದ ಹಸಿರುದಳದ ನಾಗರಾಜ್ ಬಜಾಲ್ ಹಾಗೂ ಸೆಲ್ಕೋ  ಉದ್ಯೋಗಿ ರವೀಣಾ ಬಂಗೇರ ಶಾಲಾ ಅಂಗಣದಲ್ಲಿ ವಿವಿಧ ಮನೋರಂಜನಾ ಆಟಗಳನ್ನು ಆಡಿಸಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ವಿವಿಧ ಆಟಗಳನ್ನು ಆಡಿ ಶಿಕ್ಷಕರು ಸಂಭ್ರಮಿಸಿದರೆ,  ತಮ್ಮ ಮೆಚ್ಚಿನ ಶಿಕ್ಷಕರಿಗೆ ವಿದ್ಯಾರ್ಥಿಗಳು ಚಪ್ಪಾಳೆಯ ಪ್ರೋತ್ಸಾಹ ನೀಡಿ  ಶಿಕ್ಷಕರ ಸಂಭ್ರಮದಲ್ಲಿ ತಾವು ಪಾಲುದಾರರಾದರು. ಸಂಗೀತಾ ಕುರ್ಚಿ, ಕ್ಯಾಟ್‌ವಾಕ್, ಅಂತ್ಯಾಕ್ಷರಿ, ಬಲೂನು ಆಟ ಆಡಿ ಶಿಕ್ಷಕರು ಖುಷಿ ಪಟ್ಟರು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಸಂದೀಪ್ ಸಾಲ್ಯಾನ್, ಶಾಲಾಭಿಮಾನಿ ಚಿನ್ನಮೈರಾ  ಹಾಗೂ ಶಾಲಾ ಶಿಕ್ಷಕರು  ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ನಾರಾಯಣ ಪೂಜಾರಿ ಎಸ್.ಕೆ. ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸಂಸದಾ ಸೇವಾ ಪ್ರತಿಷ್ಠಾನದ ವತಿಯಿಂದ ವೀರಕಂಭ ಮಜಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*