Uncategorized

ಬಂಟ್ವಾಳದಲ್ಲಿ ಸೆ.11ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನಾಚರಣೆ

ಬಂಟ್ವಾಳ:  ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ 168ನೇ ಜನ್ಮದಿನಾಚರಣೆ ಸಮಾರಂಭ ಸೆ.11ರಂದು ಭಾನುವಾರ ಪೂರ್ವಾಹ್ನ 11 ಗಂಟೆಗೆ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಲಿದೆ ಎಂದು ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ವಿ.ಸುನಿಲ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ವಹಿಸುವರು. ಪ್ರಶಸ್ತಿ ಪುರಸ್ಕೃತರಾದ ಎಂ.ತುಂಗಪ್ಪ ಬಂಗೇರ, ಶೈಲಜಾ ರಾಜೇಶ್, ಬಿ.ವಿಶ್ವನಾಥ ಅವರನ್ನು ಸನ್ಮಾನಿಸಲಾಗುವುದು. ವಿದುಷಿ ಡಾ. ದಾಕ್ಷಾಯಿಣಿ ಕಂದೂರು, ಸ್ವಾತಿ ಕುದ್ಕೋಳಿ ಅವರನ್ನು ಅಭಿನಂದಿಸಲಾಗುವುದು. ಮಧ್ಯಾಹ್ನ ಬಿಲ್ಲವ ಮಹಿಳಾ ಸಮಿತಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಬೆಳಗ್ಗೆ 7ರಿಂದ ಭಜನೆ, 10ರಿಂದ ಗುರುಪೂಜೆ, 10.30ಕ್ಕೆ ಮಹಾಪೂಜೆ ಮಧ್ಯಾಹ್ನ 1.30ರಿಂದ ಅನ್ನಸಂತರ್ಪಣೆ ಇರಲಿದೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪಾಧ್ಯಕ್ಷ ಮಹಾಬಲ ಬಂಗೇರ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ.ತುಂಬೆ, ಕೋಶಾಧಿಕಾರಿ ಉಮೇಶ್ ಸುವರ್ಣ, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಲೆಕ್ಕಪರಿಶೋಧಕ ನ್ಯಾಯವಾದಿ ಸತೀಶ್ ಬಿ. ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts