
ಬಿಹಾರದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಬಿಹಾರ ಉಸ್ತುವಾರಿಯೂ ಆಗಿರುವ ರಿಯಾಝ್ ಫರಂಗಿಪೇಟೆ ಮನೆಗೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಮಿಸಿ ಬಿಹಾರದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಸುಮಾರು ಎಂಟು ಗಂಟೆಗಳ ಕಾಲ ಸುದೀರ್ಘ ವಿಚಾರಣೆ, ನಡೆಸಿ, ವಿವರಗಳನ್ನು ಕಲೆಹಾಕಿದರು.

ಬೆಳಗ್ಗೆಯೇ ಆಗಮಿಸಿದ ತನಿಖಾಧಿಕಾರಿಗಳು ಮಧ್ಯಾಹ್ನದವರೆಗೂ ಇದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಿಯಾಝ್, ಪಾರದರ್ಶಕ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಎನ್.ಐ.ಎ ಇತ್ಯಾದಿ ತನಿಖಾ ಸಂಸ್ಥೆಗಳು ಆಳುವ ಪಕ್ಷದ ಅಣತಿಯಂತೆ ಕಾರ್ಯನಿರ್ವಹಿಸಬಾರದು ಎಂದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡ್ ನಲ್ಲಿ ಎನ್.ಐ.ಎ: ವಿಚಾರಣೆ ಬಳಿಕ SDPI ಮುಖಂಡ ರಿಯಾಜ್ ಫರಂಗಿಪೇಟೆ ಹೇಳಿದ್ದೇನು?"