ಬಂಟ್ವಾಳ: ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ(ರಿ.) ವಿಟ್ಲ ಶಾಖೆ ಆಶ್ರಯದಲ್ಲಿ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ಶುಕ್ರವಾರ ವಿಟ್ಲ ಶ್ರೀಭಗವತಿ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು.
ವಿಠ್ಠಲ ಬಾಲಿಕಾ ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ. ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀಭಗವತಿ ದೇವಸ್ಥಾನದ ಆಡಳಿತ ವ್ಯವಸ್ಥಾಪಕ ಕೇಶವ ಆರ್.ವಿ. ಅತಿಥಿಯಾಗಿದ್ದರು. ಕಲಾ ಕೇಂದ್ರದ ನಿರ್ದೇಶಕ ಮಂಜುನಾಥ್ ಪಿ.ಎಸ್. ಇದ್ದರು. ಉಪನ್ಯಾಸಕಿ ಮೈತ್ರಿ ಭಟ್ ನಿರೂಪಿಸಿದರು. ಬಳಿಕ ನೃತ್ಯಗುರು, ವಿದುಷಿ ಶಾಲಿನಿ ಆತ್ಮಭೂಷಣ್ ನೃತ್ಯ ನಿರ್ದೇಶನ ಹಾಗೂ ನಟುವಾಂಗದಲ್ಲಿ ವಿಟ್ಲ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಹಾಡುಗಾರಿಕೆಯಲ್ಲಿ ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ಗೀತೇಶ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ಕಾಞಂಗಾಡ್ ಸಹಕರಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…