ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನ ವನ್ನು ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಆಚರಿಸಲಾಯಿತು.
ಶಾಲ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ದೀಪ ಪ್ರಜ್ವಲಿಸಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳು ಕೇವಲ ಸಂತರಾಗಿ ಉಳಿಯದೆ ಸಮಾಜ ಸುಧಾರಣೆಯ ಮೂಲಕ ಅಂದಿನ ಕಾಲದಲ್ಲಿದ್ದ ಅನಿಷ್ಟ ಪದ್ದತಿಗಳ ವಿರುದ್ಧ ಹೋರಾಡಿದ ಶ್ರೇಷ್ಠ ದಾರ್ಶನಿಕರು. ಅವರ ಜೀವನ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ ಸಲ್ಲಿಸಬೇಕು ಎಂದರು. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎನ್ನುವ ನಾರಾಯಣ ಗುರುಗಳ ವಾಣಿ ಶೋಷಿತರು, ಹಿಂದುಳಿದ ವರ್ಗದವರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಶಕ್ತಿ ನೀಡಿದೆ ಎಂದು ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಉಪಾಧ್ಯಕ್ಷ ಬಾಲಕೃಷ್ಣ ಜಿ, ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ ಮುಖ್ಯ ಶಿಕ್ಷಕ ರಮಾನಂದ, ಮೌರೀಸ್ ಡಿಸೋಜಾ ಹಾಗೂ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.
Be the first to comment on "ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ"